Breaking News

ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಅಕ್ಟೋಬರ್ 9ರಂದು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಡಿ.ಎಚ್. ಶಂಕರಮೂರ್ತಿ ಅವರು ತಿಳಿಸಿದರು.

1949 ರಲ್ಲಿ ಆರಂಭವಾದ ಸಹ್ಯಾದ್ರಿ ಕಾಲೇಜು ಈಗ 80 ವಸಂತದಲ್ಲಿದೆ.‌ ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ಅವರ ದಿವ್ಯ ಹಸ್ತದಿಂದ ಕಾಲೇಜು ಆರಂಭವಾಗಿದ್ದು ಇಂದು ಎಲ್ಲ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದೆ ಎಂದರು.

ಡಾ. ಬಿ ಎಂ ಸುರೇಶ್, ಜಿ.ಎಸ್ ಶಿವರುದ್ರಪ್ಪ, ಪಿ ಲಂಕೇಶ್, ಯು ಆರ್ ಅನಂತಮೂರ್ತಿ, ಕಡಿದಾಳ್ ಶಾಮಣ್ಣ ಸೇರಿದಂತೆ ಅನೇಕ ಸಾಧಕರು ನಮ್ಮ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ.‌ಈ ಬಾರಿಯ ವಿದ್ಯಾರ್ಥಿ ಸಮಾಗಮವನ್ನು ಅರ್ಥಪೂರ್ಣವಾಗಿ ಮತ್ತು ಕ್ರಿಯಾಶೀಲವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ : https://cnewstv.in/?p=6151

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*