Cnewstv.in / 24.09.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ವಿಧಾನಸೌಧದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಸರ್ಕಾರದ ವಿವಿಧ ಸೇವೆಗಳನ್ನು ಗ್ರಾಮಪಂಚಾಯಿತಿಗಳ ಮೂಲಕ ಜನರಿಗೆ ಒದಗಿಸುವುದಕ್ಕಾಗಿ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಜನರು ವಿವಿಧ ಯೋಜನೆಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದು ತಪ್ಪಿಸಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ರಾಜ್ಯದ ಜನರು ಸರ್ಕಾರದ ಅಗತ್ಯ ಸೇವೆಗಳನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ನೀಡಲು ಯೋಜನೆಯಲ್ಲಿ ಸಿದ್ಧಪಡಿಸಲಾಗಿದೆ. ಇದನ್ನು ಜ.26 ರಿಂದ 5 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಿದ್ದೇವೆ ಎಂದರು.
ಇದನ್ನು ಓದಿ : https://cnewstv.in/?p=6180
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv