Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ : ಭಾರತೀಯ ಕಿಸಾನ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿದ ಭಾರತ ಬಂದ್ ಗೆ ಅನೇಕ ಕನ್ನಡಪರ ಸಂಘಟನೆಗಳು ಬೆಂಬಲವನ್ನ ವ್ಯಕ್ತಪಡಿಸಿದರು.
ಇಂದು ಬೆಳ್ಳಂಬೆಳಗ್ಗೆ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂದೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಘೋಷಣೆಗಳನ್ನು ಕೂಗಿದರು.
ಬಸ್ ಸಂಚಾರವನ್ನು ತಡೆಯಲು ಮುಂದಾದ ಪ್ರತಿಭಟನಾಕಾರರು ಬಸ್ ಮುಂಭಾಗದಲ್ಲಿ ಉರುಳು ಸೇವೆಯನ್ನ ಸಹ ಮಾಡಿದರು. ಆದರೆ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ಯಕರ್ತರನ್ನು ತಡೆದು ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಇದನ್ನು ಒದಿ : https://cnewstv.in/?p=6235
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv