Breaking News

ಪ್ರೋತ್ಸಾಹಧನ ನೀಡಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ.

Cnewstv.in / 30.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : 2019-20 ಮತ್ತು 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್‍ಸಿ ಪರೀಕ್ಷೆಯಲ್ಲಿ ಶೇ.60 ರಿಂದ ಶೇ.74.99 ಹಾಗೂ ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನಿಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಲಾಗಿನ್‍ನಲ್ಲಿ ಅವಕಾಶ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಅಂಕಪಟ್ಟಿ, ಜಾತಿ ಮತ್ತು ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿಯ ಹೆಸರಿನಲ್ಲಿರುವ ಬ್ಯಾಂಕ್ ಪಾಸ್‍ಬುಕ್ ಪ್ರತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಶಿವಮೊಗ್ಗ ಅಥವಾ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರು(ಗ್ರೇಡ್ 1 ಮತ್ತು 2), ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಕಚೇರಿ ವೇಳೆಯಲ್ಲಿ ತೆರಳಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08182-279222 ಮತ್ತು 9482762350 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : https://cnewstv.in/?p=6281

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*