Cnewstv.in /01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : 2020-21 ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್ ಹಾಗೂ ಸಂಬಂಧಿತ ಇತರೆ ಕೋರ್ಸುಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೀಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಜೋಗ ರಸ್ತೆ, ಸಾಗರ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : https://cnewstv.in/?p=6306
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments