Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ರೈತರ ಹತ್ಯೆಯನ್ನು ಹಾಗೂ ಹತ್ಯೆಗೊಳಗಾದ ರೈತ ಕುಟುಂಬವನ್ನು ಭೇಟಿಯಾಗಲು ಹೋದಂತಹ ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿ ರವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಶಿವಪ್ಪ ನಾಯಕ ವೃತ್ತದಲ್ಲಿ ರೈತ ವಿರೋಧಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಾ ರೈತರನ್ನು ದಮನ ಮಾಡಲು ಹೊರಟ್ಟಿದ್ದು ಇದನ್ನ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದರು. ಸುಮಾರು 10 ತಿಂಗಳಿಂದ ರೈತರು ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ಇದ್ದರೂ ರೈತರು ಯಾವುದೇ ಹಾಲನ್ನು ಸ್ವೀಕರಿಸಿರುವ ಕುರುಡುತನವನ್ನು ತೋರಿಸುವ ಸರ್ಕಾರ ಈಗಾಗಲೇ ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇರುವ ಕಡೆ ರೈತರು ಪ್ರತಿಭಟನೆ ಮಾಡಿದರೆ ಹೋರಾಟವನ್ನು ಹತ್ತಿಕ್ಕಲು ರೈತರು ಮತ್ತೆ ಹೋರಾಟಗಾರರ ಮೇಲೆ ಕೇಸುಗಳನ್ನು ದಾಖಲಿಸುವುದು ಅಲ್ಲದೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರೈತರನ್ನು ಹತ್ಯೆ ಮಾಡಿದ್ದು ಕೂಡಲೇ ಈ ರೈತ ವಿರೋಧಿ ಭ್ರಷ್ಟ ಬಿಜೆಪಿ ಸರ್ಕಾರವನ್ನ ಕೇಂದ್ರದ ಮತ್ತು ಹಲವು ರಾಜ್ಯಗಳಲ್ಲಿ ಬಿಜೆಪಿ ನಡೆಸುತ್ತಿರುವ ಸರ್ಕಾರವನ್ನು ವಜಾ ಮಾಡಬೇಕು ಎಂದು ರಾಷ್ಟ್ರಪತಿ ಗಳಲ್ಲಿ ಯುವ ಕಾಂಗ್ರೆಸ್ ಆಗ್ರಹಿಸಿದರು.
ಇದನ್ನು ಓದಿ : https://cnewstv.in/?p=6324
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments