Breaking News

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ವಿನಾಯಿತಿ”, ಮತ್ತು “ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in/2122 ವೆಬ್ ಸೈಟ್ ಮೂಲಕ ದಿ: 31-10-2021 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು www.bcwd.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ 8050770005/8050770004/08035254757 ಗೆ ಕರೆ ಮಾಡಬಹುದು ಎಂದು ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : https://cnewstv.in/?p=6333

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*