Breaking News

ದೇಶದಲ್ಲಿ ತಗ್ಗಿದ ಕೊರೊನಾ, ಇಂದು ಸೋಂಕಿತರ ಸಂಖ್ಯೆ 18,833 ಗುಣಮುಖರಾದವರ ಸಂಖ್ಯೆ 24,770

Cnewstv.in / 06.10.2021/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,833 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 278 ಜನ ಸಾವನ್ನಪ್ಪಿದಾರೆ.

24,770 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,52,902 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,31,75,656 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 92.17 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,71,881 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,49,538 ಕ್ಕೆ ಏರಿಕೆಯಾಗಿದೆ. ‌

ಇದನ್ನು ಓದಿ : https://cnewstv.in/?p=4009

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*