Cnewstv.in / 06.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ನಾಡಹಬ್ಬ ದಸರಾವನ್ನು ಈ ಬಾರಿ ಸರಳವಾಗಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ನವರಾತ್ರಿ ಸಡಗರಕ್ಕೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ರಾಜ್ಯದಲ್ಲಿ ಕೋವಿಡ್ 3ನೇ ಆಲೆಯ ಆತಂಕವನ್ನು ಗಮನದಲ್ಲಿರಿಸಿಕೊಂಡು ಹೊಸ ಮಾರ್ಗಸೂಚಿಯನ್ನು ರೂಪಿಸಿದೆ.
ಈ ಬಾರಿ ದಸರಾಕ್ಕೆ ಮೈಸೂರು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ದಸರಾ ಕಾರ್ಯಕ್ರಮಗಳಲ್ಲಿ 400 ಗಿಂತ ಹೆಚ್ಚು ಜನ ಸೇರಬಾರದು ಎಂದು ಸೂಚನೆ ನೀಡಲಾಗಿದೆ. ಈ ಮಾರ್ಗಸೂಚಿ ಅಕ್ಟೋಬರ್ 7 ರಿಂದ 15ರವರೆಗೆ ಜಾರಿಯಲ್ಲಿರುತ್ತದೆ.
ಹೆಚ್ಚು ಜನ ಸೇರದೆ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ ಕಡ್ಡಾಯವಾಗಿ ಬಳಸಿ ಸರಳವಾಗಿ ಹಬ್ಬವನ್ನು ಆಚರಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶವನ್ನು ಹೊರಡಿಸಿದ್ದಾರೆ.
ಇದನ್ನು ಓದಿ : https://cnewstv.in/?p=6339
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments