Cnewstv.in / 06.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಶಿವಮೊಗ್ಗ ನಗರ ಸೇರಿದಂತೆ ಹಲವೇಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಕ
ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಇಂದು ಬೆಳಿಗ್ಗೆಯಿಂದ ಬಿಡುವು ಕೊಡದೆ ಮಳೆ ಸುರಿಯುತ್ತಿದ್ದು, ಕೆಲವು ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ.
ಮತ್ತೊಂದೆಡೆ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ತಗ್ಗು ಪ್ರದೇಶ ಮಾತ್ರವಲ್ಲದೆ
ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ನಗರದ ಪ್ರಮುಖ ಬಡಾವಣೆಗಳು ಹಾಗೂ ರಸ್ತೆಗಳ ತುಂಬೆಲ್ಲಾ ನೀರು ನಿಂತಿದೆ. ಸಿದ್ದೇಶ್ವರ ನಗರ, ಹೊಸಮನೆ, ಗೋಪಾಲ ಗೌಡ ಬಡಾವಣೆಯ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಇನ್ನಷ್ಟು ಹಾನಿ ಉಂಟಾಗುವ ಸಂಭವವಿದೆ.
“ರಾಜಕಾಲುವೆಯಿಂದ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಿಕೊಡಿ ಎಂದು ಮಳೆಗಾಲಕ್ಕೆ ಮುನ್ನವೇ ನಾವು ಜಿಲ್ಲಾಧಿಕಾರಿಗಳಿಗೆ, ಸಚಿವರಿಗೆ, ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದರೂ ಏನೂ ಪ್ರಯೋಜನವಾಗಿಲ್ಲ. ಪ್ರತಿಷ್ಠಿತ ಬಡಾವಣೆ ನೀರು ನುಗ್ಗುತ್ತದೆ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗುತ್ತಿದೆ. ವೈಜ್ಞಾನಿಕ ಕಾಮಗಾರಿ, ಜನಪ್ರತಿನಿಧಿಗಳ ನಿರ್ಲಕ್ಷ, ಮತ್ತು ಭ್ರಷ್ಟಾಚಾರವೇ ಇಷ್ಟಕ್ಕೆಲ್ಲ ಕಾರಣ.”
ಜಿ.ಡಿ. ಮಂಜುನಾಥ್
ಗೋಪಾಲ ಗೌಡ ಬಡಾವಣೆ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಗಳ ಒಕ್ಕೂಟದ ಅಧ್ಯಕ್ಷರು
ಇದನ್ನು ಓದಿ : https://cnewstv.in/?p=6343
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments