Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 24,431 ಗುಣಮುಖರಾದವರ ಸಂಖ್ಯೆ 29,639

Cnewstv.in / 07.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 22,431 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 318 ಜನ ಸಾವನ್ನಪ್ಪಿದಾರೆ.

29,639 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,00,258 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 92.17 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,94,312 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,49,856 ಕ್ಕೆ ಏರಿಕೆಯಾಗಿದೆ. ‌

ಇದನ್ನು ಓದಿ : https://cnewstv.in/?p=6361

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*