cnewstv.in / 08.10.2021/ ಹಾನಗಲ್/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಹಾನಗಲ್ : ವಿಧಾನಸಭಾ ಉಪಚುನಾವಣೆಯಲ್ಲಿ ಶಿವರಾಜ ಸಜ್ಜನರ ಹೆಸರು ಘೋಷಣೆ ಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಸಂಸದ ಶಿವಕುಮಾರ್ ಉದಾಸಿ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲಿ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ ಪಟ್ಟಣದ ಬಿಜೆಪಿ ಕಾರ್ಯಾಲಯ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವರಾಜ್ ಗೆ ಟಿಕೆಟ್ ನೀಡುವುದಾದರೆ ನಾವು ಕೆಲಸ ಮಾಡುತ್ತೇವೆ ಇಲ್ಲದಿದ್ದರೆ ಎಲ್ಲಾ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.
ಇದನ್ನು ಓದಿ : https://cnewstv.in/?p=6374
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments