cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ರಾಜ್ಯದಾದ್ಯಂತ ಮತ್ತೆ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಸರಾಸರಿ 14.2 ಮಿ.ಮಿ. ಮಳೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಎಂ.ಎಂ ಮಳೆಯಾಗಿದೆ. ಈಗಾಗಲೇ ಸೆ. 30 ರಿಂದ ಅಕ್ಟೋಬರ್ 6 ರವರೆಗೆ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ.
ಇದನ್ನು ಓದಿ : https://cnewstv.in/?p=6400
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments