cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಡುರಾತ್ರಿ ಯುವಕರು ಪಟಾಕಿ ಸಿಡಿಸಿ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ.
ನಗರದ ದುರ್ಗಿಗುಡಿ ಜನವಸತಿ ಪ್ರದೇಶದಲ್ಲಿ ಮಧ್ಯರಾತ್ರಿ 2 ಗಂಟೆಗೆ ಯುವಕರು ಪಟಾಕಿ ಸಿಡಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪೊಲೀಸರು ಶಬ್ದ ಕೇಳಿಸಿಕೊಂಡು ಸ್ಥಳಕ್ಕೆ ಆಗಮಿಸಿದ್ದಾರೆ. ಇದನ್ನು ನೋಡುತ್ತಿದ್ದಂತೆ ಯುವಕರು ತಮ್ಮ ಬೈಕ್ ಗಳನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಪೊಲೀಸರು ಒಂದು ಹೋಂಡಾ ಆಕ್ಟೀವ್, ಸ್ಕೂಟಿ ಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : https://cnewstv.in/?p=6410
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments