cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರು 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 KM ಸೈಕಲ್ ಮುಖಾಂತರ ಸಂಚಯಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ.
ಬೆಂಗಳೂರು ನಗರ,ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.
ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬೆಂಬಲ
ನಾಳೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಕಿರಣ್ ಕುಮಾರ್ ಜೊತೆ ಸೇರಿ, ಮಹಾವೀರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಸಾಂಕೇತಿಕವಾಗಿ ನಡಿಗೆಯಲ್ಲಿ ಮನವಿ ಸಲ್ಲಿಸಲಿದ್ದಾರೆ.
ಇದನ್ನು ಓದಿ : https://cnewstv.in/?p=6425
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments