cnewstv.in /11.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 18,132 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 193 ಜನ ಸಾವನ್ನಪ್ಪಿದಾರೆ.
21,563 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,27,347 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,32,93,478 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 94.70 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,38,94,312 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,50,589 ಕ್ಕೆ ಏರಿಕೆಯಾಗಿದೆ.
ಇದನ್ನು ಓದಿ : https://cnewstv.in/?p=6432
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

C News TV Kannada News Online in cnewstv