Breaking News

ಸ್ವ ಉದ್ಯೋಗ ಉಚಿತ ತರಬೇತಿಗೆ ಅರ್ಜಿ ಆಹ್ವಾನ

cnewstv.in /11.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ ಕುರಿ ಸಾಕಣಿಕೆ ” ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ದಿ:21/10/2021 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ತಕ್ಷಣವೇ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 9538271653, ಅಥವಾ EMAIL – cbrsetiholaur@gmail.com ನ್ನು ಸಂಪರ್ಕಿಸುವುದು.

ಇದನ್ನು ಓದಿ : https://cnewstv.in/?p=6430

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*