Breaking News

ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ.ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 14,313 ಗುಣಮುಖರಾದವರ ಸಂಖ್ಯೆ 26,579

cnewstv.in /12.10.2021/ ನವದೆಹಲಿ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 14,313 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 181 ಜನ ಸಾವನ್ನಪ್ಪಿದಾರೆ.

26,578 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,14,900 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,33,20,057 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 95 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,39,85,920 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4,50,963 ಕ್ಕೆ ಏರಿಕೆಯಾಗಿದೆ. ‌

ಇದನ್ನು ಓದಿ : https://cnewstv.in/?p=6435

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

 

Leave a Reply

Your email address will not be published. Required fields are marked *

*