cnewstv.in /12.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ತಾಲೂಕಿನ ಉಂಬೇಬೈಲ್ ಸಮೀಪದ ಸಾಲಿಗೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ದನ ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ.
ನೆನ್ನೆ ರಾತ್ರಿ ಕೃಷ್ಣಮೂರ್ತಿ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ದನ ಮತ್ತು ಕರುವಿನ ಮೇಲೆ ತಡರಾತ್ರಿ ಚಿರತೆ ದಾಳಿ ಮಾಡಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ ಮತ್ತು ಕರುವನ್ನು ಸಾಯಿಸಿ ದನವನ್ನು ತಿಂದುಹಾಕಿದೆ.
ಕಳೆದ ತಿಂಗಳಷ್ಟೇ ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ ಗ್ರಾಮಸ್ಥರು ಇದೀಗ ಮತ್ತೆ ಚಿರತೆ ದಾಳಿಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ. ಇತ್ತೀಚೆಗೆ ಕಾಡುಪ್ರಾಣಿಗಳ ದಾಳಿಯು ಗ್ರಾಮಸ್ಥರು ನಿದ್ದೆಗೆಡಿಸಿದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನು ಓದಿ : https://cnewstv.in/?p=6437
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments