Breaking News

ವರುಣ ಆರ್ಭಟ : 12 ದಿನಗಳಲ್ಲಿ 21 ಮಂದಿ ಸಾವು.

cnewstv.in /13.10.2021/ ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು.

ಮಂಗಳವಾರ ರಾತ್ರಿ ವಿವಿಧ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮುಖ್ಯ ಮಂತ್ರಿಯವರು ನಂತರ ಸುದ್ದಿಗಾರರ ಜೊತೆ ಮಾತನಾಡಿದ್ದರು,

ಇಲ್ಲಿವರೆಗೂ ಮಳೆ ಸಂಬಂಧಿ ಅನಾಹುತಗಳಲ್ಲಿ 12 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮನೆ ಕುಸಿದು 7 ಮಂದಿ ಸಾವನ್ನಪ್ಪಿದ್ದವರೂ ಕೂಡ ಸೇರಿದ್ದಾರೆ, ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ರೂ.10 ಸಾವಿರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

2,500 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಮತ್ತು ಮೌಲ್ಯಮಾಪನ ನಡೆಸಿದ ನಂತರ ಪರಿಹಾರವನ್ನು ನೀಡಲಾಗುವುದು. ಜೂನ್ ನಿಂದ ಇಲ್ಲಿ ವರೆಗೂ 4.71 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಮಳೆಯಿಂದ ಹಾನಿಯಾಗಿದೆ. 1.17 ಲಕ್ಷ ರೈತರಿಗೆ ರೂ.105 ಕೋಟಿ ಪರಿಹಾರ ನೀಡಲಾಗಿದೆ. ತುರ್ತು ಬಳಕೆಗೆ ಜಿಲ್ಲಾಧಿಕಾರಿಗಳ ಬಳಿ ರೂ.734 ಕೋಟಿ ಹಣ ಕೂಡ ಇದೆ. 2,500 ಮನೆಗಳು ಮಳೆಯಿಂದಾಗಿ ಹಾನಿಯಾಗಿವೆ ಎಂದರು.

ಇದನ್ನು ಓದಿ : https://cnewstv.in/?p=6439

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*