cnewstv.in /19.10.2021/ ಉತ್ತರ ಪ್ರದೇಶ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಹಜಹಾನ್ ಪುರ: ದೆಹಲಿಯರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ವಕೀಲರ ಡ್ರೆಸ್ ಧರಿಸಿ ಬಂದಿದ್ದ ಆರೋಪಿಗಳು ಶೂಟ್ ಮಾಡಿದ ಬಳಿಕ ಪರಾರಿಯಾಗಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು . ಅದೇ ರೀತಿಯ ಘಟನೆ ಇಂದು ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಶಹಜಹಾನ್ ಪುರದ ಜಿಲ್ಲಾ ಕೋರ್ಟ್ ನ ಆವರಣದಲ್ಲಿ ವಕೀಲರೊಬ್ಬರಿಗೆ ಗುಂಡು ಹಾರಿಸಿ ಹತ್ಯೆ ಮಾಡಲಾದ ಘಟನೆ ಇಂದು ಬೆಳಗ್ಗೆ 11.30ರ ವೇಳೆಗೆ ನಡೆದಿದೆ. ಭೂಪೇಂದ್ರ ಸಿಂಗ್ ಕೊಲೆಯಾದ ವಕೀಲ.
ಭೂಪೇಂದ್ರ ಸಿಂಗ್ ಕೋರ್ಟ್ ಆವರಣದೊಳಗೆ ಬೇರೊಬ್ಬರೊಂದಿಗೆ ಮಾತನಾಡುತ್ತಿದ್ದಾಗ ಅಪರಿಚಿತನೊಬ್ಬ ಶೂಟ್ ಮಾಡಿ ಕೊಲೆ ಮಾಡಿದ್ದಾನೆ. ಶೂಟ್ ಮಾಡಿದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಭೂಪೇಂದ್ರ ಸಿಂಗ್ ಗೆ ಗುಂಡು ಹಾರಿಸಿ ಹತ್ಯೆ ಮಾಡಿರುವುದರ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ.
ಆರೋಪಿ ಏಕಾಂಗಿಯಾಗಿ ಕೋರ್ಟ್ ನ ಆವರಣದೊಳಗೆ ಬಂದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಇದನ್ನು ಓದಿ : https://cnewstv.in/?p=6504
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments