cnewstv.in /19.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಾಗರಿಕ ಸಂಸ್ಕೃತಿಯ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು.
ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ. ಈ ಕೂಡಲೇ ನಳಿನ್ ಕುಮಾರ್ ಕಟೀಲ್ ನನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ನಿಂದ ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ನ ಎಸ್ ಕುಮಾರೇಶ್ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಎಂ ರಾಹುಲ್, ಪುಷ್ಪಕ್ ಕುಮಾರ್ , ಯುವ ಕಾಂಗ್ರೆಸ್ ಮುಖಂಡ ಟಿವಿ ರಂಜಿತ್ , ತಂಗರಾಜ್ , ಮಸ್ತಾನ್, ವೆಂಕಟೇಶ್ ಕಲ್ಲೂರು ಭಾಸ್ಕರ್ , ಚರಣ್, ಶ್ರೀನಿವಾಸ್ ,ರಾಹುಲ್ , ಪವನ್ ಇತರರು ಇದ್ದರು.
ಇದನ್ನು ಓದಿ : https://cnewstv.in/?p=6509
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments