cnewstv.in /20.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ. ಭೂಮಿ ಹುಣ್ಣಿಮೆ ಮಲೆನಾಡಿನ ಹಳ್ಳಿಗರಿಗೆ ವಿಶೇಷ ಹಬ್ಬ. ಅದರಲ್ಲೂ ಗದ್ದೆ, ತೋಟ ಹೊಂದಿರುವವರಿಗೆ ಈ ದಿನ ಹೊಸ ಸಡಗರ. ನಸುಕಿನಿಂದಲೇ ಹಬ್ಬದ ಸಿದ್ಧತೆಗಳು ಆರಂಭವಾಗುತ್ತವೆ.
ಭೂಮಿ ಹುಣ್ಣಿಮೆಯನ್ನು ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಭೂತಾಯಿಗೆ ಮಕ್ಕಳು ಈ ದಿನ ವಿಶೇಷ ಪೂಜೆ ಮಾಡುತ್ತಾರೆ. ವರ್ಷಪೂರ್ತಿ ಬೆಳೆ ನೀಡುವ ಭೂ ತಾಯಿಗೆ ರೈತರು ಈ ದಿನ ಪೂಜೆ ಮಾಡುತ್ತಾರೆ. ಭತ್ತದ ತೆನೆ ಬರುವ ಈ ಸಂದರ್ಭದಲ್ಲಿ ಭೂತಾಯಿಗೆ ಮಾಡುವ ಪೂಜೆಯನ್ನು ಸೀಮಂತ ಎಂದು ಕೂಡ ಕರೆಯುತ್ತಾರೆ.
ಭೂಮಿ ಹುಣ್ಣಿಮೆ ಮಲೆನಾಡಿನ ರೈತರ ಪಾಲಿಗೆ ಸಂಭ್ರಮದ ಹಬ್ಬ. ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭೂಮಿ ಹುಣ್ಣಿಮೆ ಹಬ್ಬ ಹೆಚ್ಚು ಪ್ರಚಲಿತದಲ್ಲಿದೆ.
ಭತ್ತದ ಗದ್ದೆಯಲ್ಲಿ ಭತ್ತದ ಗಿಡಗಳಿಗೆ ಪೂಜೆ ಮಾಡುತ್ತಾರೆ. ಅಡಿಕೆ ತೋಟ ಇರುವವರು ಅಡಿಕೆ ಮರಕ್ಕೆ ಸೀರೆಯನ್ನು ಉಡಿಸಿ, ಆಭರಣಗಳನ್ನು ಧರಿಸಿ ಶೃಂಗಾರ ಮಾಡುರುತ್ತಾರೆ. ಕುಟುಂಬದವರು ಸೇರಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಬಳಿಕ ದೇವರುಗಳಿಗೆ ಹಾಗೂ ಭೂಮಿ ತಾಯಿಗೆ ಬಗೆ ಬಗೆಯ ಅಡುಗೆಗಳನ್ನು ನೈವೇದ್ಯ ಮಾಡಿ ಒಂದು ಎಡೆಯನ್ನು ಗದ್ದೆಯಲ್ಲಿ ಇಟ್ಟು, ಭೂಮಿ ತಾಯಿಯ ಬಳಿ ಉತ್ತಮ ಫಸಲನ್ನು ನೀಡಿ ನಮ್ಮ ಕುಟುಂಬಕ್ಕೆ ಒಳ್ಳೆಯದನ್ನು ಮಾಡು ಎಂದು ಬೇಡಿಕೊಳ್ಳುತ್ತಾರೆ.
ಬುಟ್ಟಿಯಲ್ಲಿ ತಂದಿದ್ದ ಊಟವನ್ನು ಮನೆಮಂದಿಯಲ್ಲಾ ಗದ್ದೆಯಲ್ಲಿ ಕುಳಿತು ಸಾಮೂಹಿಕವಾಗಿ ಹಬ್ಬದೂಟ ಮಾಡುತ್ತಾರೆ. ಶ್ರದ್ಧಾ ಭಕ್ತಿಯಿಂದ ಅರ್ಥಪೂರ್ಣವಾಗಿ ಭೂಮಿಯ ಹುಣ್ಣುಮೆ ಮಾಡಿ, ವರ್ಷವಿಡಿ ಉತ್ತಮ ಫಸಲನ್ನು ನೀಡಲಿ ಎಂದು ಪ್ರಾಥಿಸುತ್ತಾರೆ.
ಇದನ್ನು ಓದಿ : https://cnewstv.in/?p=6514
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments