Cnewstv.in /20.10.2021 /ಲಕ್ನೋ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಲಕ್ನೋ : ಉತ್ತರಪ್ರದೇಶದ ಕುಶಿನಗರದಲ್ಲಿ ವಿಮಾನನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದರು.
2020ರಲ್ಲಿ ಉತ್ತರಪ್ರದೇಶದ ಕುಶಿನಗರ ವಿಮಾನನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನಾಗಿ ಪೋಷಿಸಲು ಪ್ರಧಾನಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಂಪುಟ ಅನುಮೋದನೆ ನೀಡಿತ್ತು. ಸುಮಾರು 260 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೊದಲ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯ ಶ್ರೀಲಂಕಾ ವಿಮಾನಯಾನ ಸಂಸ್ಥೆಯಾಗಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮತ್ತು ಬಿಹಾರದ ಹತ್ತಿರದ ಜಿಲ್ಲೆಗಳಲ್ಲಿ ಹೂಡಿಕೆ ಮತ್ತು ಉದ್ಯೋಗವಕಾಶಗಳನ್ನು ಹೆಚ್ಚಿಸುವಲ್ಲಿ ಪ್ರಮುಖ ಹೆಜ್ಜೆಯಾಗಲಿದೆ. ಈ ವಿಮಾನ ನಿಲ್ದಾಣವನ್ನು ಒಳಗೊಂಡಂತೆ ಉತ್ತರಪ್ರದೇಶದಲ್ಲಿ ಮಾತ್ರ, 9 ಹೊಸ ವಿಮಾನ ನಿಲ್ದಾಣಗಳು ಮತ್ತು ಟರ್ಮಿನಲ್‌ಗಳನ್ನು ಜನರಿಗೆ ಒದಗಿಸಲಾಗಿದೆ. ಭಾರತದ ಅತಿದೊಡ್ಡ ವಿಮಾನ ನಿಲ್ದಾಣವಾಗಲಿರುವ ಜೇವರ್ ವಿಮಾನ ನಿಲ್ದಾಣವು ದಾಖಲೆಯ ವೇಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಇದನ್ನು ಒದಿ : https://cnewstv.in/?p=6517
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments