Cnewstv.in /21.10.2021/ ಮೈಸೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೈಸೂರು : ವರುಣನ ಆರ್ಭಟಕ್ಕೆ ಈಗಾಗಲೇ ಉತ್ತರಭಾರತ ತತ್ತರಿಸಿಹೋಗಿದೆ. ಅಂತೆಯೇ ರಾಜ್ಯದಲ್ಲೂ ಸಹ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರಿ ಮಳೆಯಿಂದಾಗಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ.
ಚಾಮುಂಡಿ ಬೆಟ್ಟದ ಮೇಲೆ ನಂದಿ ಪ್ರತಿಮೆಗೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದಿದೆ. ಈ ಭಾಗವನ್ನು ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಎರಡು ವರ್ಷಗಳಲ್ಲಿ ಎರಡು ಬಾರಿ ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. 2019ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ನಲ್ಲಿ ರಸ್ತೆ ಕುಸಿದಿತ್ತು. ಇಂದು ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆ ಭಾಗದಲ್ಲಿ ಭೂಕುಸಿತ ಸಂಭವಿಸಿದೆ.
ಇದನ್ನು ಒದಿ : https://cnewstv.in/?p=6529
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv