Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ನಗರದ ಮೂರು ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಡಿವಿಎಸ್ ಕಾಲೇಜಿಗೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
2017 -18 ನೇ ಸಾಲಿನ ಅತ್ಯುತ್ತಮ ಘಟಕ ರಾಜ್ಯಪ್ರಶಸ್ತಿಯನ್ನು ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.B.R ಧನಂಜಯ್ ರವರಿಗೆ ಹಾಗೂ ಅದೇ ಕಾಲೇಜಿನ ಡಾ. ನಾಗರಾಜ್ ನಾಯಕ್ ಅವರಿಗೆ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ ನೀಡಲಾಗಿದೆ.
2019 -20 ನೇ ಸಾಲಿನ ಅತ್ಯುತ್ತಮ ಘಟಕ ರಾಜ್ಯಪ್ರಶಸ್ತಿಯನ್ನು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರವರಿಗೆ ಹಾಗೂ ಅದೇ ಕಾಲೇಜಿನ ಪ್ರೊ. ಎಂ ನಾಗರಾಜ್ ಅವರಿಗೆವ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಯನ್ನು ನೀಡಲಾಗಿದೆ.
ಡಿವಿಎಸ್ ಕಾಲೇಜಿನ ಎಸ್ ಮಾರುತಿ ಅವರಿಗೆ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಯನ್ನು ನೀಡಲಾಗಿದೆ.
ಇದನ್ನು ಒದಿ : https://cnewstv.in/?p=6537
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments