Cnewstv.in /22.10.2021 / REPORT / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತೈಲಬೆಲೆ ಏರಿಕೆ ಎಫೆಕ್ಟ್ : ಉತ್ತರ ಭಾರತದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ. ಕರ್ನಾಟಕದಲ್ಲಿ ಶುರುವಾಗುತ್ತಾ ಜನರ ಪರದಾಟ
ಪೆಟ್ರೋಲ್ ಡೀಸೆಲ್ ಸೇರಿದಂತೆ ತೈಲೋತ್ಪನ್ನಗಳ ಬೆಲೆ ಏರಿಕೆಯಿಂದಾಗಿ ಜನರು ಕಂಗಾಲಾಗಿದ್ದಾರೆ. ತೈಲ ಬೆಲೆ ಏರಿಕೆಯಿಂದಾಗಿ ಹಲವು ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ. ದಿನಬಳಕೆಯ ವಸ್ತುಗಳ ಬೆಲೆಯು ಸಹ ದಿನೇ ದಿನೇ ಗಗನಕ್ಕೇರುತ್ತಿದೆ. ಇದೆಲ್ಲದರ ನಡುವೆ ಅಕಾಲಿಕ ಮಳೆಯು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಉತ್ತರ ಭಾರತದ ಹಲವು ರಾಜ್ಯಗಳಿಗೆ ತರಕಾರಿ ಬೆಲೆಯೂ ಗಗನಕ್ಕೇರಿದೆ. ಅಕಾಲಿಕ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿದ್ದು, ಟೊಮೆಟೊ, ಈರುಳ್ಳಿ, ಆಲೂಗೆಡ್ಡೆ, ಸೇರಿದಂತೆ ತರಕಾರಿಗಳ ಬೆಲೆ ಏರಿಕೆಯಾಗಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ರಾಜ್ಯಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 50 ರೂಪಾಯಿ, ಬಟಾಣಿ 120 ರೂಪಾಯಿ, ಟೊಮ್ಯಾಟೊ 85 ರೂಪಾಯಿ ಆಲೂಗೆಡ್ಡೆ 85 ರೂಪಾಯಿ ಅಗಿದೆ.
ಈಗಾಗಲೇ ರಾಜ್ಯದಲ್ಲೂ ಸಹ ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಜೊತೆಗೆ ರಸಗೊಬ್ಬರಗಳ ಕೊರತೆಯಿಂದಾಗಿ ಬೆಳೆ ಕುಂಠಿತಗೊಳ್ಳಬಹುದು ಎಂಬದು ರೈತರ ಅತಂಕ
ಈರುಳ್ಳಿ ಸೇರಿದಂತೆ ಪ್ರಮುಖ ಬೆಳೆಗಳನ್ನು ಬೇರೆ ಕಡೆಯಿಂದ ಆಮದು ಮಾಡಿಕೊಳ್ಳಬೇಕಾಗುತ್ತದೆ. ತೈಲ ಬೆಲೆ ಏರಿಕೆಯಿಂದಾಗಿ ತರಕಾರಿಗಳ ಬೆಲೆಯೂ ಸಹ ಏರಿಕೆಯಾಗಬಹುದು ಎಂದು ವ್ಯಾಪಾರಸ್ಥರು ಅಂದಾಜಿಸಿದ್ದಾರೆ.
ಒಟ್ಟಿನಲ್ಲಿ ಬೆಲೆ ಏರಿಕೆ ಸಾಮಾನ್ಯ ಜನರ ಜೀವನದ ಮೇಲೆ ಬಾರಿ ಪರಿಣಾಮ ಬೀರುತ್ತಿದೆ. ಉತ್ತರ ಭಾರತದಲ್ಲಿ ಬೆಲೆ ಏರಿಕೆಯ ಕಾವು ಮುಟ್ಟಿದ್ದು, ನಿಧಾನವಾಗಿ ಅದರ ಕಾವು ಕರ್ನಾಟಕದಲ್ಲೂ ಕಾಣಸಿಗಬಹುದು.
ಇದನ್ನು ಒದಿ : https://cnewstv.in/?p=6549
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv