Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆ ಮೂಲಕ ದಾಖಲಿಸಲು ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಹಿಂದೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.16 ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿಗಳನ್ನು ಆಹ್ವಾನಿಸುವ ಸಲುವಾಗಿ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಅ.22 ರಿಂದ 28 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು(ಗ್ರೇಡ್-1&2) ಇವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಎಲ್ಲಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಹಾಗೂ ದೂರವಾಣಿ ಸಂಖ್ಯೆ: 08182-279222, ಮೊ.ಸಂ: 9482762350 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6558
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments