Cnewstv.in /22.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೇಣಿ ಕಣ್ಣನ್ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
2020ರಲ್ಲಿ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿತ್ತು. ಅದರೆ ಆ ಗುತ್ತಿಗೆದಾರನಿಗೆ ಮೂರು ಲಕ್ಷ ರೂಪಾಯಿ ಗ್ರಾಮ ಪಂಚಾಯಿತಿಯಿಂದ ಮಂಜೂರಾದ ಬೇಕಿತ್ತು. ಈ
ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50.000 ರೂಪಾಯಿ ಕೊಡುವಂತೆ ವೇಣಿ ಕಣ್ಣನ್ ಬೇಡಿಕೆಯಿಟ್ಟಿದ್ದರು. ಇಂದು 25.000 ರೂಪಾಯಿ ಹಣವನ್ನು ಪಡೆಯುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೇಣಿ ಕಣ್ಣನ್ ಹಣ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನೇರವಾಗಿ ದಾಳಿ ನಡೆಸಿದ್ದಾರೆ. ವೇಣಿ ಕಣ್ಣನ್ ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನು ಒದಿ : https://cnewstv.in/?p=6571
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv