Breaking News

ಗಾಂಜಾ ಹಾವಳಿ ತಡೆಗಟ್ಟುವಂತೆ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರ.

Cnewstv.in /23.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲೆಯಲ್ಲಿ ಹಾಗೂ ನಗರದಲ್ಲಿ ಗಾಂಜಾ ಹಾವಳಿ ವ್ಯಾಪಕವಾಗಿದೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಧಾನಪರಿಷತ್ ಸದಸ್ಯರಾದ ಅಯನೂರು ಮಂಜುನಾಥರವರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪತ್ರಮುಖೇನ ಒತ್ತಾಯಿಸಿದ್ದಾರೆ

ಶಾಲಾ-ಕಾಲೇಜಿಗೆ ಹೋಗುವ ಯುವಸಮೂಹ ಮಾದಕ ಸೇವನೆಯಿಂದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ.
ನಗರದ ಕೃಷಿ ಕಾಲೇಜು ಸೇರಿದಂತೆ ಬಹುತೇಕ ಕಾಲೇಜುಗಳ ಸುತ್ತಮುತ್ತ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಗಾಂಜಾ ಮತ್ತಿನಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಗಾಂಜಾ ವ್ಯಸನಗಳಿಂದ ಇತ್ತೀಚೆಗೆ ಜಿಲ್ಲೆಯ ಶಾಂತಿಗೆ ಭಂಗ ವಾಗುತ್ತಿದೆ.

ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಬ್ಇನ್ಸ್ಪೆಕ್ಟರ್, ಸಿಬ್ಬಂದಿಗಳು ಗಸ್ತು ತಿರುಗಬೇಕು ಗಾಂಜಾ ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆಹಚ್ಚಿ ತಡೆಗಟ್ಟಬೇಕು‌. ನಿರ್ಲಕ್ಷ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನು ಒದಿ : https://cnewstv.in/?p=6579

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*