Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಕೀಳಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ವಿಪಕ್ಷನಾಯಕ ರಾಹುಲ್ ಗಾಂಧಿ ವಿರುದ್ಧ ನಳಿನ್ ಕುಮಾರ್ ಕಟೀಲ್ ನೀಡಿರುವ ಕೀಳುಮಟ್ಟದ ಹೇಳಿಕೆಯನ್ನು ತಕ್ಷಣವೇ ವಾಪಸ್ ಪಡೆಯಬೇಕು ಹಾಗೂ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಅಗ್ರಹಿಸಿ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾವೀರ್ ವೃತ್ತದಲ್ಲಿ ನಳೀನ್ ಕುಮಾರ್ ಕಟೀಲ್ ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್, ಮಾಜಿ ಶಾಸಕರಾದ ಕೆ.ಬಿ ಪ್ರಸನ್ನ ಕುಮಾರ್ ಮಹಾನಗರಪಾಲಿಕೆ ಸದಸ್ಯರಾದ ರೇಖಾ ರಂಗನಾಥ, ಚಂದ್ರಬೋಪಾಲ್ , ರಾಮೇಗೌಡರು , ಸೌಗಂಧಿಕಾ , ನಿಹಾಲ್ , ಸುವರ್ಣ , ಚಿನ್ನಪ್ಪ ಇನ್ನು ಮುಂತಾದವರಿದ್ದರು
ಇದನ್ನು ಒದಿ : https://cnewstv.in/?p=6584
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments