Cnewstv.in /25.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಾಗೂ ಮುಂಬರುವ ಹಬ್ಬದ ಪ್ರಯುಕ್ತ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್, ವಾಣಿಜ್ಯ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಎಲ್ಲಾ ಬ್ಯಾಂಕ್‍ಗಳ ವತಿಯಿಂದ ಅ.28 ರಂದು ಬೆಳಿಗ್ಗೆ 10 ಗಂಟೆಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಬೃಹತ್ ಸಾಲ ಸಂಪರ್ಕ ಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ ಕೃಷಿಸಾಲ, ಗೃಹಸಾಲ, ವಾಹನ ಸಾಲ, ಎಂಎಸ್‍ಎಂಇ ಹಾಗೂ ಇತರೆ ಸಾಲಗಳನ್ನು ನೀಡುವುದರೊಂದಿಗೆ ವಿವಿಧ ಸಾಲಗಳ ಸಮಗ್ರ ಮಾಹಿತಿ ನೀಡಲಾಗುವುದು.
ಪಿಎಂ ಜನ ಸುರಕ್ಷಾ ಯೋಜನೆಗಳನ್ನು ಹೆಚ್ಚು ಪ್ರಚಲಿತಗೊಳಿಸಲು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳಾದ ಪಿಎಂಜೆಡಿವೈ ಯಲ್ಲಿ ಖಾತೆ ತೆರೆಯಲು ಪೂರಕವಾಗಲಿದೆ ಹಾಗೂ ಪಿಎಂಎಸ್‍ಬಿವೈ, ಪಿಎಂಜೆಜೆಬಿವೈ ಮತ್ತು ಎಪಿವೈ ದಾಖಲಾತಿ ಮಾಡಲು ಪೂರಕವಾಗಲಿದೆ.
ಸರ್ಕಾರದ ಯೋಜನೆಗಳಾದ ಕೃಷಿ ಮೂಲಸೌಕರ್ಯ ನಿಧಿ, ಪಿಎಂಇಜಿಪಿ, ಪಿಎಂಎವೈ, ಪಿಎಂ ಸ್ವನಿಧಿ, ಪಿಎಂಎಫ್‍ಎಂಇ, ಸ್ಟ್ಯಾಂಡ್ ಅಪ್ ಇಂಡಿಯಾ, ಇಸಿಎಲ್‍ಜಿಎಸ್ ಹಾಗೂ ಮುಂತಾದ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಸಾಲವನ್ನು ಮಂಜೂರು ಮಾಡಲು ನಿರ್ದೇಶಿಸಲಾಗಿದೆ.
ಈ ಸಾಲ ಮೇಳದಲ್ಲಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲೇ ಸಾಲ ಮಂಜೂರಾತಿ ನೀಡಲು ಸದಸ್ಯ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆಯುವಂತೆ ಕೋರಲಾಗಿದೆ.
ಉದ್ಘಾಟನೆ: ಬೃಹತ್ ಸಾಲ ಸಂಪರ್ಕ ಮೇಳದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ, ಎಲ್ಲಾ ಬ್ಯಾಂಕುಗಳ ಉನ್ನತ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6591
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments