Cnewstv.in /26.10.2021/ ಇಂದೋರ್ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇಂದೋರ್ :ಎರಡು ಡೋಸ್ ಲಸಿಕೆ ಹಾಕಿಸಿಕೊಂಡರೆ ನಾವು ಸ್ವಲ್ಪಮಟ್ಟಿಗೆ ಸೇಫ್ ಅಂತ ಬಹಳ ಜನ ಅಂದುಕೊಂಡಿದ್ದರು ಆದ್ರೆ ಮಹಾಮಾರಿ ಕೊರೊನಾ ವೈರಸ್ ಎರಡು ಡೋಸ್ ಲಸಿಕೆ ಹಾಕಿಸಿಕೊಂಡು ಸಹ ರೂಪಾಂತರದಲ್ಲಿ ಕಾಣಿಸಿಕೊಂಡಿದೆ.
ಎರಡು ಡೋಸ್ ಲಸಿಕೆ ಪಡೆದಿದ್ದರೂ ಸಹ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಆರು ಜನರಲ್ಲಿ ಹೊಸ ಕರೋನ ವೈರಸ್ ಡೆಲ್ಟಾ ಪ್ಲಾಸ್ A.Y.4.2 ಕಾಣಿಸಿಕೊಂಡಿದೆ.
ದೆಹಲಿ ಮೂಲದ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ವರದಿಯ ಪ್ರಕಾರ, 6 ಜನರು ಸಹ 2 ಡೋಸ್ ಲಸಿಕೆಯನ್ನು ಪಡೆದಿದ್ದರು ಕೂಡ ಹೊಸ ರೂಪಾಂತರ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಅವರ ಸಂಪರ್ಕಕ್ಕೆ ಬಂದಂತಹ 5 ಕ್ಕೂ ಹೆಚ್ಚು ಜನರಿಗೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರು ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=6600
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments