Cnewstv.in /26.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನೂ ಮಾರಾಟ ಮಾಡಲು
ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ನಿಂದ ತಾಲ್ಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷೆಯ ಯೋಜನೆ ಜಲಜೀವನ್ ಮಿಷನ್. ಅದರೆ ಈ ಯೋಜನೆಯಡಿ ಕುಡಿಯುವ ನೀರನ್ನೂ ಸಹ ಸರ್ಕಾರ ಮಾರಾಟ ಮಾಡಲು ಮುಂದಾಗಿದೆ. ಪ್ರತಿ ಗ್ರಾಮ ಪಂಚಾಯತ್‌ಗಳಲ್ಲೂ ಬೇರೆ ಬೇರೆ ಆದಾಯದ ಮೂಲಗಳಿರುತ್ತವೆ. ಆದರೆ, ಪ್ರತಿ ವ್ಯಕ್ತಿಗೆ
ದಿನಕ್ಕೆ 55 ಲೀಟರ್ ನೀರು ಒದಗಿಸುವುದಾಗಿ ಹೇಳುತ್ತಾ ಅದಕ್ಕೂ ಶುಲ್ಕ ಪಡೆಯುವ ಈ ಕ್ರಮ ಸರಿಯಲ್ಲ.
ಇದು ಮುಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಖಾಸಗೀಕರಣ ಹಾಸುಹೊಕ್ಕಾ ಇರುವಂತೆ ನೀರಿನ ಪೂರೈಕೆಯನ್ನು ಖಾಸಗೀಕರಣ ಮಾಡುವ ಹುನ್ನಾರಾವಾಗಿದೆ.
ಕೂಡಲೇ ರಾಜಪಾಲರು ಗ್ರಾಮೀಣ ಪ್ರದೇಶದಲ್ಲಿ ನೀರಿನ ಮೀಟರ್ ಅಳವಡಿಕೆ ಕೈಬಿಡುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ನಿಂದ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆಯನ್ನೂ ನೀಡಿದರು.
ಪ್ರತಿಭಟನೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಮನು ಎಂ. ರಾಜ್ಯ ಕಾರ್ಯದರ್ಶಿ ಚೇತನ್ ಕೆ. ಮಧುಸೂಧನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್, ಹಾಗೂ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು
ಇದನ್ನು ಒದಿ : https://cnewstv.in/?p=6603
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments