Cnewstv.in /27.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಇಂದು ಬೀದಿ ಬದಿ ವ್ಯಾಪಾರಸ್ಥರಿಗೆ ಪೋಲಿಸರು ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ.
ರಸ್ತೆಬದಿ ವ್ಯಾಪಾರ ಮಾಡದಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರು ಸಹ ಡೋಂಟ್ ಕೇರ್ ಎನ್ನುವಂತಿದ್ದ ವ್ಯಾಪಾರಸ್ಥರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗದ ಪ್ರಮುಖ ರಸ್ತೆಗಳಾದ ಗಾಂಧಿಬಜಾರ್, ಬಿ.ಎಚ್.ರಸ್ತೆ, ನೆಹರು ರಸ್ತೆಗಳ ಪುಟ್ ಪಾತ್ ನಲ್ಲಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಸಂಬಂಧ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ವ್ಯಾಪಾರಸ್ಥರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುವಂತೆ ಇದ್ದಂತಹ ಕೆಲ ಅಂಗಡಿಗಳ ಬೋರ್ಡ್ ಹಾಗೂ ಸಾಮಗ್ರಿಗಳನ್ನು ಟೈಗರ್ ವಾಹನದಲ್ಲಿ ಅಧಿಕಾರಿಗಳು ತೆಗೆದುಕೊಂಡು ಹೋದರು. ಮತ್ತೆ ಅದೇ ಜಾಗದಲ್ಲಿ ವ್ಯಾಪಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಇದನ್ನು ಒದಿ : https://cnewstv.in/?p=6615
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments