Cnewstv.in /28.10.2021/ ದಾವಣಗೆರೆ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದಾವಣಗೆರೆ : ಕೊರೊನಾದಿಂದ ಶಿಕ್ಷಣಕ್ಷೇತ್ರ ಅನುಭವಿಸಿದಷ್ಟು ತೊಂದರೆ ಬೇರೆ ಯಾವುದೇ ಕ್ಷೇತ್ರ ಅನುಭವಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ಇಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದ ಶಿಕ್ಷಣ ಕ್ಷೇತ್ರ ಅನುಭವಿದಷ್ಟು ತೊಂದರೆ ಬೇರೆ ಯಾವುದೇ ಕ್ಷೇತ್ರ ಅನುಭವಿಸಿಲ್ಲ. ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕೂಡ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಹೆಚ್ಚು ಒತ್ತು ನೀಡುತ್ತಿದೆ. ಅದರಂತೆ ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲಾಗುವುದು.
ಟಾಸ್ಕ್ ಫೋರ್ಸ್ ಸಮಿತಿ ರಚನೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲು ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಲ್ಲೂ ಆರಂಭಿಸಲಾಗುವುದು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ಸಂಬಂಧಿಸಿದಂತೆ ಮದನಗೋಪಾಲ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದೆ.
ಇನ್ನು ಟಾಸ್ಕ್ ಫೋರ್ಸ್ ನಲ್ಲಿ ಶಿಕ್ಷಣತಜ್ಞರು, ಸ್ವಯಂಸೇವಾ ಸಂಸ್ಥೆಗಳು ಇರಲಿದೆ. ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ, ಪಠ್ಯ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
ಇದನ್ನು ಒದಿ : https://cnewstv.in/?p=6618
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv