Cnewstv.in /28.10.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಪರಿಶಿಷ್ಟ ಜಾತಿ ಹಾಗೂ ವರ್ಗದವರ ಸವಲತ್ತುಗಳು ಮತ್ತು ಯಾವುದೇ ರೀತಿಯ ಸಮಸ್ಯೆಗಳಿಗೆ ಸಂಬಂಧಿತ ಇಲಾಖೆಗಳು ತ್ವರಿತವಾಗಿ ಸ್ಪಂದಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೂಡ ನಿಯಮಾನುಸಾರವಾಗಿ ನಿಗದಿತ ಅವಧಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿ ಪರಿಹಾರ ನೀಡಬೇಕೆಂದರು.
ಕಳೆದ ಸಮಿತಿ ಸಭೆಯ ಅನುಪಾಲನಾ ವರದಿ ಚರ್ಚೆ ವೇಳೆ ಅವರು ಮಾತನಾಡಿ ಜುಲೈ ನಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರು ಸಭೆಯ ಗಮನಕ್ಕೆ ತಂದ ಪರಿಶಿಷ್ಟ ಜಾತಿ, ವರ್ಗದವರ ಸಮಸ್ಯೆಗಳು, ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಲಾಗಿದ್ದು, ಕೆಲವು ಪ್ರಕರಣಗಳು ಚಾರ್ಚ್‍ಶೀಟ್, ತನಿಖೆ ಹಂತದಲ್ಲಿವೆ ಎಂದರು.
ಕೋವಿಡ್ 19 ರಿಂದ ಮೃತಪಟ್ಟ ಪರಿಶಿಷ್ಟ ಜಾತಿ ಹಾಗೂ ವರ್ಗದ ಕುಟುಂಬದ ಅವಲಂಬಿತರಿಗೆ ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ವತಿಯಿಂದ ಸಹಾಯಧನಕ್ಕಾಗಿ ಹಲವು ಅರ್ಜಿಗಳನ್ನು ನಿಗಮಕ್ಕೆ ಕಳುಹಿಸಿದ್ದೇವೆ. ಇದೀಗ ಹರಮಘಟ್ಟ, ಬೀರನಹಳ್ಳಿ ಹಸೂಡಿಯ ವೀರಭದ್ರ ಕಾಲೋನಿಯ ಸಂತ್ರಸ್ತರಿಗೆ ಸಂಬಂಧಿಸಿದ ಅರ್ಜಿಗಳನ್ನು ನೀಡಿದ್ದು ಶೀಘ್ರವಾಗಿ ವಿಲೇ ಮಾಡುವಂತೆ ಹಾಗೂ ಶಿವಮೊಗ್ಗ ತಾಲ್ಲೂಕಿನ ಸದಾಶಿವಪುರ ಹಕ್ಕಿಪಿಕ್ಕಿ ಕ್ಯಾಂಪ್ ಬುಡಕಟ್ಟು ಸಮುದಾಯದವರಿಗೆ ವಸತಿ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಇದನ್ನು ಒದಿ : https://cnewstv.in/?p=6624
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv