Cnewstv.in /29.10.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದು ಬೆಳಗ್ಗೆ ಪುನೀತ್ ರಾಜ್ ಕುಮಾರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾಘಟಕದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಆಸ್ಪತ್ರೆಯ ಪ್ರಮುಖ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ವೀಕ್ಷಣೆಗೆ ರಾಜಕುಮಾರ್ ಕುಟುಂಬದವರು ತೆರಳಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಕುಟುಂಬಸ್ಥರು ದೌಡಾಯಿಸಿದ್ದಾರೆ. ಸಹೋದರ ರಾಘವೇಂದ್ರ ರಾಜಕುಮಾರ್ ಶಿವರಾಜ್ ಕುಮಾರ್ ಪುತ್ರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನು ಒದಿ : https://cnewstv.in/?p=6638
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv