Cnewstv.in /29.10.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು: ಇಂದು ಬೆಳಿಗ್ಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಸ್ಯಾಂಡ್ ವುಡ್ ಚಿತ್ರ ನಟ ಪುನೀತ್ ರಾಜಕುಮಾರ್ ಇಂದು ಬೆಳಗ್ಗೆ ಜಿಮ್ಮಿನಲ್ಲಿ ಕಸರತ್ತು ಮಾಡುತ್ತಿದ್ದಾಗ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಹಿರಿಯ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಪುನೀತ್ ರಾಜಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ.
ಸಾವಿನಲ್ಲೂ ಸಾರ್ಥಕತೆ..
ಕೇವಲ ನಟನೆ ಮಾತ್ರವಲ್ಲದೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅನಾಥಾಶ್ರಮ, ವೃದ್ಧಾಶ್ರಮ, ಗೋಶಾಲೆ, ಮೈಸೂರಿನಲ್ಲಿ ಶಕ್ತಿಧಾಮ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸಿದ್ದರು. ನೇತ್ರದಾನ ಮಾಡುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆಯನ್ನ ಮೆರೆದಿದ್ದಾರೆ.
ವರ ನಟ ಡಾ. ರಾಜಕುಮಾರ್ ಅವರು ಕೂಡ ನೇತ್ರದಾನವನ್ನು ಮಾಡಿದ್ದರು. ನೇತ್ರದಾನ ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಅನೇಕರಿಗೆ ಪ್ರೇರಣೆಯಾಗಿದ್ದಾರೆ. ಅಂತೆಯೇ ಸ್ವಯಂ ಪುನೀತ್ ರಾಜಕುಮಾರ್ ಅವರು ಕೂಡ ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ…
ಇದನ್ನು ಒದಿ : https://cnewstv.in/?p=6642
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv