Cnewstv.in / 1.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಕ್ರಾಸ್ ಬಳಿ ಅಪಘಾತವಾಗಿದ್ದು, ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.
ವೇಗವಾಗಿ ಬರುತ್ತಿದ್ದ ಬೊಲೇರೇ ವಾಹನ ನಿಯಂತ್ರಣ ತಪ್ಪಿ ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಡಿಕ್ಕಿ ಹೊಡೆದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಏತನೀರಾವರಿ ಕೆಲಸ ಮಾಡುತ್ತಿದ್ದ ಆದಿತ್ಯ ಕನ್ಸ್ಟ್ರಕ್ಷನ್ ಕಾರ್ಮಿಕ ಚಂದ್ರಶೇಖರ್ ಎಂದು ಗುರುತಿಸಲಾಗಿದೆ.
ನಂತರ ಅದೇ ಬೊಲೆರೋ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದ್ವಿಚಕ್ರವಾಹನ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಲೆರೋ ವಾಹನ ದೊಳಗಿಂದ ಇಬ್ಬರಿಗೂ ಸಹ ಗಾಯಗಳಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಒದಿ : https://cnewstv.in/?p=6683
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv