Breaking News

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 10,929 ಗುಣಮುಖರಾದವರ ಸಂಖ್ಯೆ 12,509

Cnewstv.in / 6.11.2021/ ನವದೆಹಲಿ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ.

ನವದೆಹಲಿ : ದೇಶದಲ್ಲಿ ಕೊರೊನಾ ಆರ್ಭಟ ದಿನೇ ದಿನೇ ಕಡಿಮೆಯಾಗುತ್ತಿದೆ. ಕೆಲವು ದಿನಗಳಿಂದ ಸತತವಾಗಿ 20,000 ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,929 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 392 ಜನ ಸಾವನ್ನಪ್ಪಿದಾರೆ.

12,509 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,46,950 ಇದೆ.

ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3.37 ಕೋಟಿಗೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 97 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,85,814 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4.60 ಲಕ್ಷಕ್ಕೆ ಏರಿಕೆಯಾಗಿದೆ. ‌

ಇದನ್ನು ಒದಿ : https://cnewstv.in/?p=6710

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*