Breaking News

ಮತದಾರರ ಪಟ್ಟಿಯ ಪರಿಷ್ಕರಣೆ ವಿಶೇಷ ಆಂದೋಲನ.

Cnewstv.in / 6.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಮತದಾರರ ಪಟ್ಟಿಯ ಪರಿಷ್ಕರಣೆ ವಿಶೇಷ ಆಂದೋಲನ

ಶಿವಮೊಗ್ಗ : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ ಮಾಹೆಯ ದಿನಾಂಕ: 07-11-2021, 14-11-2021, 21-11-2021 ಹಾಗೂ 28-11-2021 ರಂದು ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಎಲ್ಲಾ ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ.

ದಿನಾಂಕ: 01-01-2022 ಕ್ಕೆ 18 ವರ್ಷ ತುಂಬುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು, ಈಗಾಗಲೇ ಸೇರ್ಪಡೆಗೊಂಡು ಈ ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ವರ್ಗಾವಣೆಗೊಂಡಿದ್ದಲ್ಲಿ, ಮತದಾರರ ಗುರುತಿನ ಚೀಟಿಯಲ್ಲಿ ಮುದ್ರಣ ದೋಷಗಳಿದ್ದಲ್ಲಿ, ಒಂದು ಮತಗಟ್ಟೆಯಿಂದ ಮತ್ತೊಂದು ಮತಗಟ್ಟೆಗೆ ಸ್ಥಳಾಂತರಗೊಂಡಿದ್ದಲ್ಲಿ ಅಥವಾ ಮರಣ ಹೊಂದಿದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಸಂಬಂಧಿಸಿದ ನಮೂನೆಗಳಲ್ಲಿ ಸ್ವಯಂ ದೃಢೀಕೃತ ದಾಖಲೆಗಳ ಸಮೇತ ಅರ್ಜಿಗಳನ್ನು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ದಿ: 07-11-2021, 14-11-2021, 21-11-2021 ಹಾಗೂ 28-11-2021 ರ ಭಾನುವಾರಗಳಂದು ಮತಗಟ್ಟೆ ಅಧಿಕಾರಿಗಳು ತಮ್ಮ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಅರ್ಜಿಗಳನ್ನು ಸ್ವೀಕರಿಸುವರು. ಉಳಿದ ಕೆಲಸದ ದಿನಗಳಲ್ಲಿಯೂ ಸಂಬಂಧಿಸಿದ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಅವಧಿಯಲ್ಲಿ 18 ವರ್ಷ ತುಂಬಿದ ಯುವ ಮತದಾರರು ಹಾಗೂ ಸಾರ್ವಜನಿಕರು ಮತದಾರರ ವಿಶೇಷ ಆಂದೋಲನ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ 113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=6714

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*