Cnewstv.in / 7.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ, ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಸುಮಾರು 753 ಕ್ವಿ. 70 ಕೆ.ಜಿ. ಅಕ್ಕಿ, 9.50 ಕ್ವಿ. ಗೋಧಿ, 400 ಗೋಣಿಚೀಲ ಹಾಗೂ ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಒಂದು ಚೀಲ ಹೊಲೆಯುವ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ಸೂಚನೆಯಂತೆ ನವೆಂಬರ್ 12 ರಂದು ಬೆಳಗ್ಗೆ 11.00ಕ್ಕೆ ಶಿವಮೊಗ್ಗ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ, ಎಪಿಎಂಸಿ ಆವರಣದಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುವುದು.
ಆಸಕ್ತಿಯುಳ್ಳ ಎಪಿಎಂಸಿ ಪರವಾನಗಿ ಹೊಂದಿರುವವರು ಷರತ್ತಿಗೊಳಪಟ್ಟು ಹರಾಜಿನಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಭಾಗವಹಿಸುವಂತೆ ಶಿವಮೊಗ್ಗ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನು ಒದಿ : https://cnewstv.in/?p=6717
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv