Breaking News

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ರವರ ಹುಟ್ಟುಹಬ್ಬ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಣೆ.

Cnewstv.in / 7.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಆಕ್ಸಿಜನ್ ಮ್ಯಾನ್ ಆಫ್ ಇಂಡಿಯಾ ಎಂದೂ ಖ್ಯಾತರಾಗಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸುವ ಮೂಲಕ ಆಚರಿಸಲಾಯಿತು.

ಅನೇಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಯುವಕರ ಧ್ವನಿಯಾಗಿ, ಮಾರ್ಗದರ್ಶಕರಾಗಿದ್ದಾರೆ ಹಾಗೂ ಕೊರೊನಾ ಸಂದರ್ಭದಲ್ಲಿ ಜನರಿಗೆ ಅವರು ಮಾಡಿರುವಂತಹ ಸೇವೆ ಅಪಾರವಾದದ್ದು, ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ.

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಎಸ್ ಕುಮರೇಶ್ , INTUC ಜಿಲ್ಲಾಧ್ಯಕ್ಷ ಪಿ ಅರ್ಜುನ್ , ಜಿಲ್ಲಾ ಯುವ ಕಾಂಗ್ರೆಸ್ ನ ಪದಾಧಿಕಾರಿಗಳಾದ ರಾಕೇಶ್ , ಕಲ್ಲೂರ್ ವೆಂಕಟೇಶ್ , ಕೆ.ಎಲ್. ಪವನ್ , ಸುಹಾಸ್ ಗೌಡ , ರಾಹುಲ್ ಸೀಗೆಹಟ್ಟಿ, ರಾಕೇಶ್ , ಮಧು ವಿಶ್ವಾಸ, ಸಂಕೇತ್ , ಚಂದನ್ ಇತರರು ಉಪಸ್ಥಿತರಿದ್ದರು

ಇದನ್ನು ಒದಿ : https://cnewstv.in/?p=6722

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*