Cnewstv.in / 9.11.2021/ ನವದೆಹಲಿ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ.
ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 10,126. ಗುಣಮುಖರಾದವರ ಸಂಖ್ಯೆ 11,982
ನವದೆಹಲಿ : ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,126 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾದಿಂದ 332 ಜನ ಸಾವನ್ನಪ್ಪಿದಾರೆ.
11,982 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,40,638 ಇದೆ.
ಈ ವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರು 3,37,75,086 ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಇಲ್ಲಿಯವರೆಗೂ 101 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,43,77,113 ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 4.61,389 ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ 5.404, ತಮಿಳುನಾಡು 841, ಮಹಾರಾಷ್ಟ್ರ 694 ಪಶ್ಚಿಮ ಬಂಗಾಳ 603, ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಇದನ್ನು ಒದಿ : https://cnewstv.in/?p=6740
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv