Cnewstv.in / 11.11.2021/ ಚೆನ್ನೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಚೆನ್ನೈ : ಟಾಲಿವುಡ್‌ನ ಸೂಪರ್‌ಸ್ಟಾರ್ ನಟ ರಜನಿಕಾಂತ್, ಪುನೀತ್ ರಾಜಕುಮಾರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವುದು ಇದೀಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ ಸಂದರ್ಭದಲ್ಲಿ ನಟ ರಜನಿಕಾಂತ್ ರವರ ಆರೋಗ್ಯ ದಲ್ಲಿ ತೊಂದರೆಯಾಗಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹಾಗಾಗಿ ಅವರು ಬೆಂಗಳೂರಿಗೆ ಬರಲು ಸಾಧ್ಯವಾಗಿರಲಿಲ್ಲ. ಈಗ ಅವರು ಚೇತರಿಸಿಕೊಂಡಿದ್ದು, ಪುನೀತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅದರೆ ಇದಕ್ಕೆ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಂತಾಪ ಸೂಚಿಸುವುದಕ್ಕಾಗಿ ನಟ ರಜನಿಕಾಂತ್ ತನ್ನ ಮಗಳು ಸೌಂದರ್ಯ ಅವರ ಆ್ಯಪ್ ಬಳಸಿಕೊಂಡಿದ್ದಾರೆ. ಪುತ್ರಿಯ ಹೂಟೆ ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಿದ ಆಡಿಯೊ ಲಿಂಕ್ ಅನ್ನು ಟ್ವಿಟರ್ ನಲ್ಲಿ ಸಹ ಹಂಚಿಕೊಂಡಿದ್ದಾರೆ. ಪುತ್ರಿಯ ಹೂಟೆ ಆ್ಯಪ್ ಬಳಸಿರುವುದು ಅದನ್ನು ಪ್ರಮೋಟ್ ಮಾಡುವ ಸಲುವಾಗಿ, ಸ್ವಾರ್ಥ ಮತ್ತು ಲಾಭದ ಉದ್ದೇಶದಿಂದ ಎಂದು ನೆಟ್ಟಿಗರು ಟೀಕಿಸುತ್ತಿದ್ದಾರೆ.
ಶಸ್ತ್ರಚಿಕಿತ್ಸೆಯ ನಂತರ ನಾನು ಚೆನ್ನಾಗಿದ್ದೇನೆ. ಸುದ್ದಿ ಕೇಳಿದ ನಂತರ ನನಗೆ ತುಂಬಾ ಬೇಸರವಾಯಿತು. ಪುನೀತ್ ನನ್ನ ಕಣ್ಣಮುಂದೆ ಬೆಳೆದ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ಮಗು. ಪವರ್ ಸ್ಟಾರ್’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ದಿವಂಗತ ನಟ ಪುನೀತ್ ಕನ್ನಡ ಚಿತ್ರರಂಗದ ದೊಡ್ಡ ತಾರೆಗಳಲ್ಲಿ ಒಬ್ಬರು ಮತ್ತು ಅಭಿಮಾನಿಗಳಲ್ಲಿ ದಂತಕಥೆಯಾಗಿದ್ದರು.ಯಶಸ್ಸಿನ ಉತ್ತುಂಗದಲ್ಲಿ ಇರುವಾಗಲೇ ನಮ್ಮನ್ನು ಅವರು ಅಗಲಿದರು. ಕನ್ನಡ ಚಿತ್ರರಂಗಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತುಗಳೇ ಬರುತ್ತಿಲ್ಲ. ಪುನೀತ್ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ನಟ ರಜನಿಕಾಂತ್ ಹೇಳಿದ್ದಾರೆ.
ಏನಿಂದು ಹೂಟೆ ಆ್ಯಪ್ ..
ಇದೊಂದು ವಾಯ್ಸ್ ಬೇಸ್ಡ್ ಸೋಶಿಯಲ್ ಮೀಡಿಯಾ ಆ್ಯಪ್ ಆಗಿದ್ದು, ಧ್ವನಿ ಮೂಲಕ ನಮ್ಮ ವಿಚಾರಗಳನ್ನು ಹಂಚಿಕೊಳ್ಳಬಹುದು. ಇದರ ಮೂಲಕವೇ ಪುನೀತ್ ರಾಜ್ ಕುಮಾರ್ ಗೆ ನಟ ರಜನಿಕಾಂತ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ ಹಾಗೂ ಅದರ ಲಿಂಕ್ ಅನ್ನು ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇದನ್ನು ಒದಿ : https://cnewstv.in/?p=6764
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv