Pneumonia..ನ್ಯೂಮೋನಿಯಾ ? ಪಿಸಿವಿ ಲಸಿಕೆ ಹಾಕಿಸಿ ಮಕ್ಕಳನ್ನು ನ್ಯೂಮೋನಿಯಾದಿಂದ ರಕ್ಷಿಸಿ..

Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆ’(ಪಿಸಿವಿ) ಯನ್ನು ಎಲ್ಲ ಅರ್ಹ ಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನು ಯಶಸ್ವಿಗೊಳಸಿಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಇಂದು ತುಂಗಾನಗರ ನಗರ ಪ್ರಸೂತಿ ಆರೋಗ್ಯ ಕೇಂದ್ರದಲ್ಲಿ ನ್ಯೂಮೊಕಾಕಲ್ ಕಾಂಜುಗೇಟ್ ಲಸಿಕೆ(ಪಿಸಿವಿ) ನೀಡಿಕೆ ಕುರಿತು ಏರ್ಪಡಿಸಲಾಗಿದ್ದ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನ್ಯೂಮೋನಿಯಾದಂತಹ ಕಾಯಿಲೆಯಿಂದ ಮಕ್ಕಳನ್ನು ರಕ್ಷಿಸುವ ಪಿಸಿವಿ ಲಸಿಕೆಯನ್ನು ಎಲ್ಲ ಮಕ್ಕಳಿಗೆ ನೀಡುವ ಮೂಲಕ ಆರೋಗ್ಯವಂತ ದೇಶ ಮಾಡುವಲ್ಲಿ ಎಲ್ಲರೂ ಸಹಕರಿಸಬೇಕೆಂದರು.

ನ್ಯುಮೋನಿಯಾ ಎಂದರೇನು ??

ಭಾರತ ಸರ್ಕಾರದ ಸಾರ್ವತ್ರಿಕ ಲಸಿಕೆಯಲ್ಲಿ ಇದು 12 ನೇ ಲಸಿಕೆಯಾಗಿ ಸೇರ್ಪಡೆಗೊಂಡಿದೆ. ಇದು ಸ್ಟ್ರೆಪ್ಟೋಕೋಕಸ್ ನ್ಯುಮೋನಿಯಾ(ನ್ಯುಮೊಕಾಕಲ್) ಎಂದು ಕರೆಯಲ್ಪಡುವ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗಗಳ ಒಂದು ಗುಂಪು. ನ್ಯುಮೋಕಾಕಲ್ ರೋಗಾಣು ಶರೀರದ ಬೇರೆ ಬೇರೆ ರೀತಿಯ ರೋಗಗಳಿಗೆ ಕಾರಣವಾಗಬಹುದಾಗಿದ್ದು ಐದು ವರ್ಷದ ಒಳಗಿನ ಮಕ್ಕಳಲ್ಲಿ ಈ ಬ್ಯಾಕ್ಟೀರಿಯಾಗಳಿಂದ ಉಂಟಾಗುವ ನ್ಯೂಮೋನಿಯಾಗೆ ಸ್ಪ್ರೆಪ್ಟೋಕೋಕಸ್ ನ್ಯೂನಿಯಾ ಪ್ರಮುಖ ಕಾರಣವಾಗಿದೆ.

ನ್ಯುಮೊಕಾಕಲ್ ನ್ಯುಮೋನಿಯಾ ಕಡಿಮೆ ಅವಧಿಯ ಉಸಿರಾಟ ಸಂಬಂಧಿಯ ತೀವ್ರ ಪ್ರಮಾಣದ ಸೋಂಕಾಗಿದ್ದು ಈ ಸೋಂಕಿನಿಂದ ಶ್ವಾಸಕೋಶಗಳಲ್ಲಿ ಉರಿಯೂತ ಹಾಗೂ ದ್ರವಗಳ ಶೇಖರಣೆ ಉಂಟಾಗುತ್ತದೆ. ಇದರಿಂದಾಗಿ ಸರಾಗವಾಗಿ ಉಸಿರಾಡಲು ಆಗದೆ ಒಳ ಹೋಗುವ ಆಮ್ಲಜನಕ ಪ್ರಮಾಣ ಕಡಿಮೆ ಆಗುತ್ತದೆ. ಮಕ್ಕಳಿಗೆ ಪಿಸಿವಿ ಲಸಿಕೆ ನೀಡಿದರೆ ಈ ಕಾಯಿಲೆಯಿಂದ ಉಂಟಾಗುವ ತೊಂದರೆ ಮತ್ತು ಸಾವನ್ನು ತಡೆಗಟ್ಟಬಹುದು.

ನ್ಯುಮೋನಿಯಾ ಮಕ್ಕಳಿಗೆ ಹೇಗೆ ಮಾರಕವಾಗಿದೆ. ??

ಮಗು ಹುಟ್ಟಿದ ಮೊದಲ ವರ್ಷದಲ್ಲಿ ಗಂಭೀರ ನ್ಯುಮೊಕಾಕಲ್ ಕಾಯಿಲೆ ಕಂಡುಬರುವ ಸಾಧ್ಯತೆ ಹೆಚ್ಚಾಗಿರುತ್ತದೆಯಾದರೂ ಎರಡು ವರ್ಷಗಳವರೆಗೂ ಇದರ ಸಾಧ್ಯತೆ ಹೆಚ್ಚಾಗಿಯೇ ಇರುತ್ತದೆ. ಉಸಿರಾಡುವಾಗ, ಕೆಮ್ಮುವಾಗ ಅಥವಾ ಸೀನುವಾಗ ವ್ಯಕ್ತಿಯ ಬಾಯಿ ಅಥವಾ ಮೂಗಿನಿಂದ ಹೊರಬೀಳುವ ತುಂತುರುಗಳಿಂದ ಈ ರೋಗ ಹರಡುತ್ತದೆ.

ಸಾಮಾನ್ಯವಾಗಿ ಆರೋಗ್ಯವಂತ ಮಕ್ಕಳು ತಮ್ಮ ರೋಗನಿರೋಧಕ ಶಕ್ತಿಯಿಂದ ಈ ಸೋಂಕಿನ ವಿರುದ್ದ ಹೋರಾಡಬಹುದು. ಐದು ವರ್ಷದ ಒಳಗಿನ ವಿಶೇಷವಾಗಿ ಎರಡು ವರ್ಷದೊಳಗಿನ ಮಕ್ಕಳು ಈ ರೋಗಕ್ಕೆ ಸಿಲುಕಿ ಬಲಿಯಾಗುವ ಸಾಧ್ಯತೆ ಹೆಚ್ಚಿದ್ದು ಶೇ.15 ರಿಂದ 17 ರಷ್ಟು 02 ವರ್ಷದೊಳಗಿನ ಮಕ್ಕಳು ಈ ರೋಗಕ್ಕೆ ಬಲಿಯಾಗುತ್ತಿದ್ದಾರೆ.

ನ್ಯುಮೋನಿಯಾಯಿಂದ ರಕ್ಷಣೆ ಹೇಗೆ ??

ಪಿಸಿವಿ ಲಸಿಕೆಯು ಚಿಕ್ಕ ಮಕ್ಕಳನ್ನು ನ್ಯುಮೋನಿಯಾ ಕಾಯಿಲೆಯಿಂದ ರಕ್ಷಿಸುತ್ತದೆ. ಈ ಲಸಿಕೆ ಸುರಕ್ಷಿತವಾಗಿದ್ದು ಈಗಾಗಲೇ ಜಗತ್ತಿನ 146 ದೇಶಗಳಲ್ಲಿ ನೀಡಲಾಗುತ್ತಿದೆ. 2017 ರಿಂದ ನಮ್ಮ ದೇಶದ 5 ರಾಜ್ಯಗಳಲ್ಲಿ ಈ ಲಸಿಕೆ ನೀಡಲಾಗುತ್ತಿದ್ದು ಈ ರಾಜ್ಯಗಳಲ್ಲಿ ಮಕ್ಕಳಲ್ಲಿ ನ್ಯುಮೋನಿಯಾ ಪ್ರಕರಣಗಳು ಅತ್ಯಂತ ಕಡಿಮೆ ಇದೆ. ಸುಮಾರು 20 ವರ್ಷಗಳಿಂದ ಖಾಸಗಿಯಾಗಿ ಈ ಲಸಿಕೆ ಲಭ್ಯವಿದ್ದು ಇದರ ವೆಚ್ಚ ಸುಮಾರು 4 ರಿಂದ 6 ಸಾವಿರ ಆಗಲಿದೆ. ಆದರೆ ಭಾರತ ಸರ್ಕಾರ ಇದೀಗ ಸಾರ್ವತ್ರಿಕ ಲಸಿಕಾಕರಣದಲ್ಲಿ ಈ ಲಸಿಕೆಯನ್ನು ಸೇರ್ಪಡೆಗೊಳಿಸಿದ್ದು ಸಂಪೂರ್ಣ ಉಚಿತವಾಗಿ ಮಗುವಿಗೆ ಒಂದೂವರೆ ತಿಂಗಳಿಗೆ, ಮೂರೂವರೆ ತಿಂಗಳಿಗೆ ಮತ್ತು ಒಂಭತ್ತು ತಿಂಗಳಿಗೆ(ಬೂಸ್ಟರ್ ಡೋಸ್) ಹೀಗೆ ಮೂರು ಡೋಸ್‍ಗಳಲ್ಲಿ ನೀಡುತ್ತಿದೆ.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 2021-22 ನೇ ಸಾಲಿಗೆ ಒಟ್ಟು 24,284 ಮಕ್ಕಳಿಗೆ ಸಾರ್ವತ್ರಿಕ ಲಸಿಕಾಕರಣದಲ್ಲಿ ಈ ಲಸಿಕೆ ನೀಡಲಾಗುವುದು. ಕೋವಿಡ್ 19 ಲಸಿಕೆ ಅಭಿಯಾನ ಮುಂದುವರೆಯುವುದರ ಜೊತೆಗೆ ಆರೋಗ್ಯ ಇಲಾಖೆ ಪಿಸಿವಿ ಅಭಿಯಾನಕ್ಕೆ ಸಿದ್ದತೆ ನಡೆಸಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಮಕ್ಕಳಿಗೆ(ಐದು ವರ್ಷದೊಳಗಿನ) ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು.

ಇದನ್ನು ಒದಿ : https://cnewstv.in/?p=6766

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments