Cnewstv.in / 11.11.2021/ ಚಿಕ್ಕಮಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಅರೆಸ್ಟ್.
ಚಿಕ್ಕಮಗಳೂರು : ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದ ಚಿಕ್ಕಮಂಗಳೂರು ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಕ್ಸಲ್ ವಲಯದಲ್ಲಿ ಬಿಜಿಕೆ ಎಂದೇ ಪ್ರಖ್ಯಾತರಾಗಿರುವ ಬಿಜಿ ಕೃಷ್ಣಮೂರ್ತಿ ಹಾಗೂ ಸಂಘಟನೆಯ ಕಬನಿದಳಂ ನ ಕಮಾಂಡರ್ ಆಗಿರುವ ಸಾವಿತ್ರಿ ಯವರನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿಯವರು ಶೃಂಗೇರಿ ಮೂಲದ ವ್ಯಕ್ತಿಯಾಗಿದ್ದು, ಸಾವಿತ್ರಿ ಅವರು ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದವರು. 2005ರಲ್ಲಿ ಸಾಕೇತ್ ರಾಜನ್ ಹತ್ಯೆ ನಂತರ ಅವರು ಪಕ್ಷದ ನಾಯಕತ್ವವನ್ನು ವಹಿಸಿಕೊಂಡಿದ್ದರು.
ಮಲೆನಾಡು ಭಾಗದಲ್ಲಿ ಸಕ್ರಿಯವಾಗಿ ನಕ್ಸಲ್ ಚಟುವಟಿಕೆಯಲ್ಲಿದ್ದರು. ಇವರ ವಿರುದ್ಧ ಚಿಕ್ಕಮಂಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆ ಸೇರಿದಂತೆ 25ರಿಂದ 30 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ದಳದವರು ಇವರಿಬ್ಬರನ್ನು ಬಂಧಿಸಿದ್ದಾರೆ. ಕೇರಳದಿಂದ ಇವರನ್ನ ಚಿಕ್ಕಮಗಳೂರಿಗೆ ಕರೆತಂದು ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಲಾಗಿದೆ.
ಇದನ್ನು ಒದಿ : https://cnewstv.in/?p=6773
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments