Cnewstv.in / 11.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಅಪ್ರಾಪ್ತ ಬಾಲಕ
ಶಿವಮೊಗ್ಗ : ಮೂರು ವರ್ಷದ ಮಗುವಿನ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ ಘಟನೆ ಇಂದು ನಡೆದಿದೆ.
ಶಿಕಾರಿಪುರ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಮಗು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಪಕ್ಕದ ಮನೆಯ 17ವರ್ಷ 11 ತಿಂಗಳಿನ ಅಪ್ರಾಪ್ತ ಬಾಲಕ ಅತ್ಯಾಚಾರ ಮಾಡಿದ್ದಾನೆ ಎಂದು ಮಗುವಿನ ತಾಯಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಗುವಿನ ತಾಯಿ ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಬಾಲಕನ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಬಾಲಕನ ವಿರುದ್ಧ ಐಪಿಸಿ ಕಲಂ 4, 6 ಮತ್ತು ಫೋಕ್ಸೋ ಕಾಯ್ದೆಯ ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಇದನ್ನು ಒದಿ : https://cnewstv.in/?p=6775
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv