Cnewstv.in / 13.11.2021/ ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಆದರೆ ಅಚ್ಚರಿಯ ವಿಚಾರವೆಂದರೆ ಈ ಕಳ್ಳತನದ ಆರೋಪ ಮಗಳ ಮೇಲಿದೆ.
ಹೌದು ಬೆಂಗಳೂರಿನಲ್ಲಿ ಇದೊಂದು ಅಪರೂಪದ ಪ್ರಕರಣ ದಾಖಲಾಗಿದೆ. ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣವನ್ನು ಲಾಕರ್ ನಲ್ಲಿ ಇಡುತ್ತೇನೆ ಎಂದು ಹೋದ ಮಗಳು ನಾಪತ್ತೆಯಾಗಿದ್ದಾಳೆ. ಈ ಕುರಿತು ಆಕೆಯ ತಾಯಿ ಮಗಳು ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ವಿಜಯಲಕ್ಷ್ಮಿ ಎಂಬುವವರು ತಮ್ಮ ಮಗಳು ತೇಜವಂತಿ ವಿರುದ್ಧ ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೆಲದಿನಗಳ ಹಿಂದೆ ವಿಜಯಲಕ್ಷ್ಮಿಯವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಆರೋಗ್ಯ ವಿಚಾರಿಸಿಕೊಳ್ಳಲು ಬಂದಂತಹ ಮಗಳು ತೇಜವಂತಿ ಚಿನ್ನಾಭರಣಗಳನ್ನು ಲಾಕರ್ ನಲ್ಲಿ ಇಡುವುದಾಗಿ ಹೇಳಿ ತೆಗೆದುಕೊಂಡು ಹೋಗಿದ್ದಾರೆ. ಒಡವೆಗಳ ಜೊತೆ ಮಗಳು ಸಹ ನಾಪತ್ತೆಯಾಗಿದ್ದಾಳೆ.
ಬರೋಬ್ಬರಿ ನಾಲ್ಕು ಕೋಟಿ ರೂಪಾಯಿ ಮೌಲ್ಯದ ಏಳುವರೆ ಕೆ.ಜಿ ಚಿನ್ನಾಭರಣಗಳು ನಾಪತ್ತೆಯಾಗಿದೆ. ಮಗಳೇ ವಂಚನೆ ಮಾಡಿದ್ದಾರೆ ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ಮಗಳು ತೇಜವಂತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=6791
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments